Refrain (Pallavi)
ಲಕ್ಷ್ಮೀನಾರಾಯಣರ ಚರಣಕ್ಕೆ ಶರಣೆಂಬೆ
ಪಕ್ಷಿವಾಹನ್ನಗೆರಗುವೆ
ಪಕ್ಷಿವಾಹನ್ನಗೆರಗುವೆ ಅನುದಿನ
ರಕ್ಷಿಸಲಿ ನಮ್ಮ ವಧೂವರರ
Lakshmi Shobhane
ಪಾಲಸಾಗರವನ್ನು ಲೀಲೆಯಲಿ ಕಡೆಯಲು
ಬಾಲೆ ಮಹಾಲಕ್ಷುಮಿ ಉದಿಸಿದಳು
ಬಾಲೆ ಮಹಾಲಕ್ಷುಮಿ ಉದಿಸಿದಳಾ ದೇವಿ
ಪಾಲಿಸಲಿ ನಮ್ಮ ವಧೂವರರ
ಬೊಮ್ಮನ ಪ್ರಳಯದಲಿ ತನ್ನರಸಿಯೊಡಗೂಡಿ
ಸುಮ್ಮನೆಯಾಗಿ ಮಲಗಿಪ್ಪ
ನಮ್ಮ ನಾರಾಯಣಗು ಈ ರಮ್ಮೆಗಡಿಗಡಿಗು
ಜನ್ಮವೆಂಬುದು ಅವತಾರ
ಕಂಬುಕಂಠದ ಸುತ್ತ ಕಟ್ಟಿದ ಮಂಗಳಸೂತ್ರ
ಅಂಬುಜವೆರಡು ಕರಯುಗದಿ
ಅಂಬುಜವೆರಡು ಕರಯುಗದಿ ಧರಿಸಿ
ಪೀತಾಂಬರವನುಟ್ಟು ಮೆರೆದಳೆ
ಒಂದು ಕರದಿಂದ ಅಭಯವನೀವಳೆ
ಮತ್ತೊಂದು ಕೈಯಿಂದ ವರಗಳ
ಕುಂದಿಲ್ಲಲದಾನಂದಸಂದೋಹ ಉಣಿಸುವ
ಇಂದಿರೆ ನಮ್ಮ ಸಲಹಲಿ
Lakshmi Shobhane
ಮುತ್ತೈದೆಯರೆಲ್ಲರೂ ಮುತ್ತಿನಾರುತಿ ಎತ್ತಿ
ಹತ್ತಾವತಾರದ ಹಯವದನಗ
ಹತ್ತಾವತಾರದ ಹಯವದನ ದೇವಗ
ಹೊಸ ಮುತ್ತಿನಾರುತಿಯ ಬೆಳಗಿರೆ ॥ ಶೋಭಾನೆ